ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

0

ನಿಡ್ಪಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇವರಿಂದ ಜು.18 ರಂದು ಪುತ್ತೂರು ಫಿಲೋಮಿನಾ ಪ್ರೌಢಶಾಲೆಯಲ್ಲಿ ಜರಗಿದ ಹದಿನೇಳರ ವಯೋಮಾನದ ತಾಲೂಕು ಮಟ್ಟದ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯರಾದ ಫಾತಿಮಾ ಅಫ್ನಾ, ತನ್ವಿ ಎ.ಕೆ ಮತ್ತು ತೃಪ್ತಿ ಅವರ ತಂಡ  ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.

ಇವರಿಗೆ ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಯವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here