ಪುತ್ತೂರು:ಇಲ್ಲಿನ ರೈಲು ನಿಲ್ದಾಣದ ಬಳಿಯಿರುವ ಲಕ್ಷ್ಮೀ ದೇವಿ ಬೆಟ್ಟದಲ್ಲಿ ನಾಗರ ಪಂಚಮಿ ಹಬ್ಬದ ಆಚರಣೆಯು ಆ.2ರಂದು ಬೆಳಿಗ್ಗೆ 10.30ರಿಂದ ನಡೆಯಲಿದೆ. ಕ್ಷೇತ್ರದ ನಾಗ ಸಾನಿಧ್ಯದಲ್ಲಿ ಸಂಪ್ರದಾಯದಂತೆ ನಡೆಯುವ ನಾಗರ ಪಂಚಮಿಯಲ್ಲಿ ನಾಗನಿಗೆ ಹಾಲಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇವೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರದ ಧರ್ಮದಶಿ ಐತ್ತಪ್ಪ ಸಪಲ್ಯ ತಿಳಿಸಿದ್ದಾರೆ.