ನಿಡ್ಪಳ್ಳಿ; ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಸತತ ಎರಡನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ ಪಡೆದುಕೊಂಡಿದೆ.
ಮಂಗಳೂರಿನಲ್ಲಿ ಅ.5 ರಂದು ನಡೆದ 2021-22 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾ ಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ರವರು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ.ಬಿ ಇವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಪ್ರಧಾನ ಮಾಡಿದರು.