ಕಾಣಿಯೂರು: ಚಾರ್ವಾಕ ಗ್ರಾಮದ ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಪಂಚಾಯಿತಿ ಅನುದಾನದಲ್ಲಿ ನಿರ್ಮಾಣವಾದ ಕುಡಿಯುವ ನೀರಿನ ಟ್ಯಾಂಕ್ನ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.
ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ದರ್ಖಾಸು ನೀರಿನ ಟ್ಯಾಂಕ್ ಉದ್ಘಾಟಿಸಿದರು. ಬಳಿಕ ನಡೆದ ಸಭೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್.ಗಣೆಶ್ ಉದನಡ್ಕ ಮಾತನಾಡಿ, ಶಾಲೆಗೆ ಅಗತ್ಯವಿದ್ದ ನೀರಿನ ಟ್ಯಾಂಕನ್ನು ತಾಲೂಕು ಪಂಚಾಯಿತಿಯಿಂದ ಒದಗಿಸಿಕೊಡಲಾಗಿದೆ. ಶಾಲಾ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಬದ್ದವಾಗಿದೆ ಎಂದರು. ಗ್ರಾಮ ಪಂಚಾಯತ್ ಸದಸ್ಯರಾದ ತೇಜ ಕುಮಾರಿ ಉದ್ಲಡ್ಡ, ಕೀರ್ತಿ ಕುಮಾರಿ ಅಂಬುಲ, ಸುಲೋಚನಾ ಮಿಯೊಳ್ಪೆ , ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಸಂತ ದಲಾರಿ, ಉಪಾಧ್ಯಕ್ಷೆ ಕುಸುಮಾವತಿ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಪದ್ಮಯ ಗೌಡ ಸ್ವಾಗತಿಸಿದರು. ಸಹ ಶಿಕ್ಷಕಿ ಲೀನಾ ಲಸ್ರಾದೋ ವಂದಿಸಿದರು.