ಪುತ್ತೂರು:ಪರಸ್ಪರ ಸಹೋದರತ್ವ ಬೆಸೆಯುವ ರಕ್ಷಾ ಬಂಧನ ಕಾರ್ಯಕ್ರಮವನ್ನು ಆ.11ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟವಾಗಿ ಆಚರಿಸಿದರು. ಪುತ್ತೂರು ಅಂಚೆ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಜೀವ ವಿಮಾ ನಿಗಮ,ನಗರ ಸಭೆ, ಆರಕ್ಷಕ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಗೆ ರಾಕಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು. ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು, ಸದಸ್ಯರು,ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.