![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ರಾಮಕುಂಜ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜ ಇವರ ಸಹಯೋಗದಲ್ಲಿ 2022ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.22ರಂದು ರಾಮಕುಂಜ ಸರಕಾರಿ ಹಿ.ಪ್ರಾ.ಶಾಲೆಯ ಮೈದಾನದಲ್ಲಿ ನಡೆಯಿತು.
ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಎನ್.ಕೆ.ಅವರು ಪಂದ್ಯಾಟ ಉದ್ಘಾಟಿಸಿ ಶುಭಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಕಡಬ ತಾಲೂಕು ವಾಲಿಬಾಲ್ ಎಸೋಸಿಯೇಶನ್ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಆತೂರು, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಮಾತನಾಡಿ ಪಂದ್ಯಾಟಕ್ಕೆ ಶುಭಹಾರೈಸಿದರು. ಪುತ್ತೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ.ಸವಣೂರು, ಉಪಾಧ್ಯಕ್ಷೆ ಜಯಂತಿ ಬಿ.ಎಂ., ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕರೀಂ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ರಾಮಕುಂಜ ಗ್ರಾ.ಪಂ.ಪಿಡಿಒ ಜೆರಾಲ್ಡ್ ಮಸ್ಕರೇನಸ್, ಆಲಂಕಾರು ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ನಿಂಗರಾಜು ಕೆ.ಪಿ., ಪಟ್ಟೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ, ಆತೂರು ಬದ್ರಿಯಾ ಶಾಲೆಯ ಆಡಳಿತ ಮಂದಳಿ ಅಧ್ಯಕ್ಷ ಆದಂ, ಎಸ್ಡಿಎಂಸಿ ದ.ಕ.ಜಿಲ್ಲಾ ಕಾರ್ಯದರ್ಶಿ ಸೆಲಿಕಾ ಕೆಮ್ಮಾರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ:
ರಾಮಕುಂಜ ಸರಕಾರಿ ಶಾಲಾ ಬಾಲಕರ ವಾಲಿಬಾಲ್ ತಂಡಕ್ಕೆ ತರಬೇತಿ ನೀಡಿದ ನೆಲ್ಯಾಡಿ ಬೆಥನಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮನೋಜ್ ಕೆ.ಜೆ., ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಚಂದ್ರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಜಾನ್ ಸನ್ಮಾನಿತರನ್ನು ಪರಿಚಯಿಸಿದರು. ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಮಹೇಶ್ ಸ್ವಾಗತಿಸಿ, ಸಹಶಿಕ್ಷಕ ಅರುಣ್ಕುಮಾರ್ ಶೇಟ್ ವಂದಿಸಿದರು. ಸಹಶಿಕ್ಷಕ ಮಲ್ಲೇಶಯ್ಯ, ಅತಿಥಿ ಶಿಕ್ಷಕಿ ರಾಧಿಕಾ ಕಾರ್ಯಕ್ರಮ ನಿರೂಪಿಸಿದರು.