ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇದರ ಸಹಕಾರದಲ್ಲಿ ಪಾಂಡವರ ಕಲ್ಲು ಹಿ.ಪ್ರಾ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಎಂಟನೇ ತರಗತಿಯ 14ರ ವಯೋಮಾನ ವಿಭಾಗದ ಆಯ್ಕೆ ಪ್ರಕ್ರಿಯೆಯಲ್ಲಿ ಹರ್ಷಿತ್ ಡಿ.ಕೆ .ಮತ್ತು ತನ್ವಿತ್ ಸಿ.ಜಿ .ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ತಂಡವನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಹೆಚ್.ಆಳ್ವ ತರಬೇತುಗೊಳಿಸಿರುತ್ತಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯು ಸೆ.೭ರಂದು ಸೈಂಟ್ ಪೌಲರ್ ಹಿರಿಯ ಪ್ರಾಥಮಿಕ ಶಾಲೆ, ನಾರಾವಿಯಲ್ಲಿ ಜರಗಲಿದೆ.

LEAVE A REPLY

Please enter your comment!
Please enter your name here