ಸುಳ್ಳಮಲೆ ಗುಹಾ ತೀರ್ಥಕ್ಕೆ ಚಾಲನೆ

0

ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಆಗಸ್ಟ್ 27 ರಂದು ನಡೆಯಿತು.ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.

ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ,ಕೇರ್ಪು ಇಟ್ಟು ದಾರ್ಮಿಕ ವಿಧಿ-ವಿದಾನವನ್ನು ನೆರವೇರಿಸಿ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೆಸರರಾದ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ತರು ಸೇರಿದಂತೆ ಊರ ಪರ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು. ಆ. 27ರಿಂದ ಆ. 31ರ ಬಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಇದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here