ತಣ್ಣೀರುಪಂಥ: ಸಂತೆ ಮಾರುಕಟ್ಟೆ ಜಮೀನು ಒತ್ತುವರಿ ಆರೋಪ ಪ್ರಕರಣ- ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿಯವರ ಪ್ರಧಾನ ಕಾರ‍್ಯದರ್ಶಿಯಿಂದ ಆದೇಶ

0

ತಹಸೀಲ್ದಾರ್ ಭೇಟಿ, ಸ್ಥಳ ಪರಿಶೀಲನೆ, ಕಾಮಗಾರಿ ಸ್ಥಗಿತಗೊಳಿಸಲು ಸೂಚನೆ

  • ಜಿ.ಪ. ಮುಖ್ಯ ಕಾರ‍್ಯನಿರ್ವಹಣಾಧಿಕಾರಿಗೆ ಕ್ರಮಕೈಗೊಳ್ಳುವಂತೆ ಸೂಚನಾ ಪತ್ರ.
  • ತಾಲ್ಲೂಕು ಪಂಚಾಯಿತಿ ಕಾರ‍್ಯ ನಿರ್ವಹಣಾಧಿಕಾರಿಯಿಂದ ಪಿಡಿಒ.ಗೆ ಕ್ರಮಕೈಗೊಂಡು ವರದಿ ಸಲ್ಲಿಕೆಗೆ ಸೂಚನೆ

ಉಪ್ಪಿನಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ತಣ್ಣೀರುಪಂಥ ಗ್ರಾಮ ಪಂಚಾಯಿತಿಗೆ ಸೇರಿದ ಸಂತೆ ಮಾರುಕಟ್ಟೆ ನಿರ್ಮಾಣ ಸಲುವಾಗಿ ಮೀಸಲು ಇರಿಸಿರುವ ಜಾಗವನ್ನು ಒತ್ತುವರಿ ಮಾಡಿಕೊಂಡು ಈ ಜಾಗದಲ್ಲಿ ವ್ಯಕ್ತಿಯೋರ್ವರು ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವ ದೂರಿನ ಮೇರೆಗೆ ಬೆಳ್ತಂಗಡಿ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿ ನಡೆಯುತ್ತಿದ್ದ ಕಟ್ಟಡ ಕಾಮಗಾರಿಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ.

ತಣ್ಣೀರುಪಂಥ ಗ್ರಾಮ ಪಂಚಾಯಿತಿಗೆ ಸೇರಿದ ಸಂತೆ ಮಾರುಕಟ್ಟೆ ನಿರ್ಮಾಣ ಸಲುವಾಗಿ ಮೀಸಲು ಇರಿಸಿರುವ ಕರಾಯ ಗ್ರಾಮದ ಸ.ನಂ. 12/3ಡಿ2ರಲ್ಲಿ 0.48 ಎಕ್ರೆ ಜಾಗವನ್ನುನಿರಂಜನ ಕುಮಾರ್ ಎಂಬವರು ಒತ್ತುವರಿ ಮಾಡಿಕೊಂಡಿದ್ದು, ಸದ್ರಿಯವರು ಈ ಜಾಗದಲ್ಲಿ ವಾಣಿಜ್ಯ ಕಟ್ಟಡವೊಂದನ್ನು ನಿರ್ಮಿಸುತ್ತಿದ್ದಾರೆ ಎಂದು ಕರಾಯ ಗ್ರಾಮದ ಶಾಲಾ ಬಳಿ ನಿವಾಸಿ ಕೆ.ಎಸ್. ಅಬ್ದುಲ್ಲ ಎಂಬವರು ಮುಖ್ಯಮಂತ್ರಿಯವರ ಪ್ರಧಾನ ಕಾರ‍್ಯದರ್ಶಿಯವರಿಗೆ ದೂರು ಸಲ್ಲಿಸಿದ್ದರು.

ದೂರು ಸ್ವೀಕರಿಸಿರುವ ಮುಖ್ಯಮಂತ್ರಿಯವರ ಪ್ರಧಾನ ಕಾರ‍್ಯದರ್ಶಿ ಎನ್. ಮಂಜುನಾಥ ಪ್ರಸಾದ್‌ರವರು ದ.ಕ. ಜಿಲ್ಲಾಧಿಕಾರಿ ಮತ್ತು ದ.ಕ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಹಣಾಧಿಕಾರಿಯವರಿಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶ ನೀಡಿದ್ದು, ಆ ಪ್ರಕಾರ ಬೆಳ್ತಂಗಡಿ ತಹಸೀಲ್ದಾರ್ ಪ್ರಥ್ವಿ ಸಾನಿಕ್ ಮತ್ತು ಕಂದಾಯ ನಿರೀಕ್ಷಕ ಪಾವಾಡಪ್ಪ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಲ್ಲಿ ನಡೆಯುತ್ತಿದ್ದ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದರು. ಅದರಂತೆ ಕಾಮಗಾರಿ ಸ್ಥಗಿತಗೊಂಡಿರುವುದಾಗಿ ತಿಳಿದು ಬಂದಿದೆ.

ಪಿಡಿಒಗೆ ತರಾಟೆ

ಸ್ಥಳ ಪರಿಶೀಲನೆ ವೇಳೆ ಪಿಡಿಒ. ಪುಟ್ಟಸ್ವಾಮಿಯವರನ್ನು ಸ್ಥಳಕ್ಕೆ ಕರೆಸಿಕೊಂಡ ತಹಸೀಲ್ದಾರ್‌ರವರು ಪಂಚಾಯಿತಿಗೆ ಸೇರಿದ ಜಾಗವನ್ನು ಕಾಯ್ದುಕೊಳ್ಳುವ ಜವಾಬ್ದಾರಿ ನಿಮ್ಮದು, ಅದನ್ನು ಮಾಡದೆ ಗಡಿಗುರುತು ಮಾಡಿ ಕೊಟ್ಟಿಲ್ಲ, ತಹಸೀಲ್ದಾರ್ ಸ್ಪಂಧಿಸಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದೀರಿ. ಇದನ್ನು ವಶಕ್ಕೆ ತೆಗೆದುಕೊಂಡು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಇ.ಒ.ರಿಂದಲೂ ಪಿಡಿಒಗೆ ಸೂಚನೆ:

ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ‍್ಯನಿರ್ವಹಣಾಽಕಾರಿಯವರು ತಣ್ಣೀರುಪಂಥ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿಯವರಿಗೆ ಜ್ಞಾಪನಾ ಪತ್ರ ಮುಖೇನ ಸ್ಥಳ ಪರಿಶೀಲನೆ ಮಾಡಿ ನಿಯಮಾನುಸಾರ ಸೂಕ್ತ ಕ್ರಮಕೈಗೊಂಡು ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಮತ್ತು ಹಿಂಬರಹ ನೀಡುವಂತೆ ಸೂಚನೆ ನೀಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಽಸಿದಂತೆ ದೂರುದಾರ ಕೆ.ಎಸ್. ಅಬ್ದುಲ್ಲರವರು ಬಿ. ನಿರಂಜನ ಕುಮಾರ್ ಎಂಬವರ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿಯೂ ದೂರು ದಾಖಲು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

LEAVE A REPLY

Please enter your comment!
Please enter your name here