ಪುತ್ತೂರು: ಸೆ.2 ರಂದು ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಿಸಲಾಯಿತು.
ಪುತ್ತೂರು ದರ್ಬೆ ವೃತ್ತದ ಬಳಿ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ನಗರ ಸಭಾ ಅಧ್ಯಕ್ಷ ಕೆ ಜೀವಂಧರ್ ಜೈನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬೂಡಿಯಾರು ರಾಧಾಕೃಷ್ಣ ರೈ, ಮಂಡಲ ಮಾಜಿ ಅಧ್ಯಕ್ಷರುಗಳು, ನಗರ, ಗ್ರಾಮಾಂತರ ಮಂಡಲದ ಪ್ರದಾನ ಕಾರ್ಯದರ್ಶಿಗಳು, ನಗರ, ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಕಾರ್ಯಕ್ರಮ ದಲ್ಲಿ ಭಾಗವಹಿಸಿದರು.