ಪುತ್ತೂರು: ಇಲ್ಲಿನ ಹೆಚ್ಪಿಆರ್ ನರ್ಸಿಂಗ್ ಮತ್ತು ಪ್ಯಾರಮೆಡಿಕಲ್ ಕಾಲೇಜಿನಲ್ಲಿ ಮೊದಲ ಬ್ಯಾಚ್ ಪ್ಯಾರಮೆಡಿಕಲ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆ.27ರಂದು ನೆರವೇರಿತು. ಕಾಲೇಜಿನ ಪ್ರಾಂಶುಪಾಲ ಇವ್ನೀಸ್ ಡಿ’ಸೋಜ ಮಾತನಾಡಿ ವಿದಾಯವೆಂದರೆ ನೆನಪುಗಳ ಮೆರವಣಿಗೆ. ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು. ಜೊತೆಗೆ ಗುರುಹಿರಿಯರಿಗೆ ಗೌರವ ಕೊಡುವ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉಪನ್ಯಾಸಕರಾದ ಕಾವ್ಯಶ್ರೀ ಎಮ್., ದಿಶಾಂತ್ ಪೂಜಾರಿ, ರೇಣುಕಾರವರು ಮಾತನಾಡಿ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ಹಲವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ನೆನಪಿನ ಕಾಣಿಕೆ ವಿತರಿಸಲಾಯಿತು.