ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಹಿತ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಕೊಲ್ಲಪದವು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ನಾರಾಯಣ ನಾಯ್ಕ ಹಾಗೂ ಸಂತೋಷ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಆ.31 ರಂದು ರಾತ್ರಿ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್. ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ಕೊಲ್ಲ ಪದವು ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಶರವು ಕಡೆಯಿಂದ ಸಾರಡ್ಕ ಕಡೆಗೆ ಓಮ್ಮಿ ಕಾರೊಂದು ಬಂದಿದ್ದು, ಅದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಕಾರಿನೊಳಗಡೆ ಗಂಡು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ಹಾಕಿರುವುದು ಕಂಡುಬಂದಿತ್ತು. ಕೂಡಲೇ ಅದರಲ್ಲಿದ್ದ ಇಬ್ಬರನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸಿದಾಗ ಕೇರಳ ಕಡೆಗೆ ಸಾಗಾಟ ಮಾಡುತ್ತಿರುವುದಾಗಿ ಅವರು ಬಾಯ್ಬಿಟ್ಟಿದ್ದಾರೆ.
ಕಾರು ಹಾಗೂ ಕರುವಿನ ಒಟ್ಟು ಮೌಲ್ಯ 1,52,000ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.