ಕೊಡಗು ನೇರುಗಳಲೆ ಪ್ರೌಢಶಾಲಾ ಶಿಕ್ಷಕ ಕೆಯ್ಯೂರಿನ ಎಸ್.ಎಂ. ಇಬ್ರಾಹಿಂ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಎಸ್.ಎಂ. ಇಬ್ರಾಹಿಂ ಅವರು ಈ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೂಲತಃ ಪುತ್ತೂರು ತಾಲ್ಲೂಕಿನ ಕೆಯ್ಯೂರು ನಿವಾಸಿಯಾಗಿರುವ ಎಸ್..ಎಂ. ಇಬ್ರಾಹಿಂ ಕಳೆದ 14 ವರ್ಷಗಳಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕುಂಬ್ರದ ಹಿರಿಯ ವರ್ತಕರಾದ ಮಹಮ್ಮದ್ ಶೇಖಮಲೆ ಎಂಬವರ 2ನೇ ಪುತ್ರರಾಗಿರುವ ಇಬ್ರಾಹಿಂ ಪುತ್ತೂರುರವರು ಅರಿಯಡ್ಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪೆರ್ನಾಜೆಯ ಸೀತಾರಾಘವ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಜೂನಿಯರ್ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದಾರೆ.
ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿರುವ ಇಬ್ರಾಹಿಂ, ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕೆಮೆಸ್ಟಿçಯಲ್ಲಿ ಎಂಎಸ್‌ಸಿ ಪೂರ್ಣಗೊಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಎಡ್ ಶಿಕ್ಷಣವನ್ನು ಪಡೆದಿದ್ದಾರೆ. ಕೇರಳದ ಖಾಸಗಿ ಶಾಲೆಯಲ್ಲಿ 8 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಇಬ್ರಾಹಿಂರವರು ನಂತರದಲ್ಲಿ ಸರ್ಕಾರಿ ಶಿಕ್ಷಕರಾಗಿ ಕೊಡಗಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಪುತ್ತೂರು ಸಮೀಪದ ಕೆಯ್ಯೂರು ಗ್ರಾಮದಲ್ಲಿ ನೆಲೆಸಿರುವ ಇವರು ಕೊಡಗಿನಿಂದ ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದಾರೆ. ಪರಿಸರ ಪ್ರೇಮಿಯಾಗಿರುವ ಇವರು ತನ್ನೂರಾದ ಕೆಯ್ಯಾರಿನಲ್ಲಿ ಪೊರ್ಲುದ ಕೆಯ್ಯೂರು ವಿಷನ್ 2025′ ಎಂಬ ಸಂಘಟನೆಯಡಿಯಲ್ಲಿ ಊರ ಪರಿಸರ ಪ್ರೇಮಿಗಳೊಂದಿಗೆ ಸೇರಿಕೊಂಡು ಕೆಯ್ಯರು ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಮತ್ತು ಕಸಮುಕ್ತ ಗ್ರಾಮವನ್ನಾಗಿಸಲು ಮತ್ತು ಹಸಿರು ಗ್ರಾಮವನ್ನಾಗಿಸಲು ಜಾಗೃತಿ ಮೂಡಿಸುವಲ್ಲಿ ಪ್ರೇರಣಾಶಕ್ತಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ವಿಭಿನ್ನ ಕಲಿಕಾ ಶೈಲಿಯಿಂದ ಹೆಸರುವಾಸಿಯಾಗಿರುವ ಇಬ್ರಾಹಿಂರವರು ಪ್ರಶಸ್ತಿ ಬಂದಿರುವುದಕ್ಕೆ ಸಂತಸ ತಂದಿದೆ. ನಾನು ಕಷ್ಟ ಪಟ್ಟು ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

20 ಪ್ರಾಥಮಿಕ, 11 ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ
20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು `ಉತ್ತಮ ಶಿಕ್ಷಕ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ.ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರನ್ನೂ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರನ್ನು 2022-23ನೇ ಸಾಲಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 2022-23ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ತಲಾ 10 ಸಾವಿರ ನಗದು ಪುರಸ್ಕಾರವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದೆ.2022-23ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಉಪನ್ಯಾಸಕ, ಪ್ರಾಂಶುಪಾಲರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಿದ್ದಾರೆ.ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಕಾರ್ಯಕ್ರಮ ನಡೆಸಿ, ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here