ಮೊರಾರ್ಜಿದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಸಫಾಯಿ ಕರ್ಮಚಾರಿಗಳ ಮಕ್ಕಳಿಂದ ಅರ್ಜಿ ಆಹ್ವಾನ

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮತ್ತು ಉಪ್ಪಿನಂಗಡಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ 2022-23ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಸಫಾಯಿ ಕರ್ಮಚಾರಿಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಯಂ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕ/ಸಫಾಯಿ ಕರ್ಮಚಾರಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಇನ್ನಿತರ ಸಾಮಾಗ್ರಿಗಳನ್ನು ನೀಡಲಾಗುವುದು.

ಅಭ್ಯರ್ಥಿಯು ತನ್ನ ಎಸ್‌ಎಟಿಎಸ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

LEAVE A REPLY

Please enter your comment!
Please enter your name here