ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

0

ಪುತ್ತೂರು:  ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ.ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ.ಇದನ್ನು ಸುಗ್ಗಿಯ ಹಬ್ಬ ಎಂದು ಕರೆಯಲಾಗುತ್ತದೆ.ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕಿಯಾದ ಶ್ರೀಮತಿ ವೀಣಾ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಓಣಂ ಆಚರಣೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಓಣಂ ಹಬ್ಬದ ಆಚರಣೆಯ ವಿಶೇಷತೆ ಮತ್ತು ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಪೂಕಳಂ ನಿರ್ಮಿಸಿ ಜ್ಯೋತಿ ಬೆಳಗಿದರು.ವಿವಿಧ ನ್ಥತ್ಯ ಪ್ರಕಾರಗಳ ಪ್ರದರ್ಶನ ವಿದ್ಯಾರ್ಥಿಗಳಿಂದ ನಡೆಯಿತು. ದ್ವಿತೀಯ ವಿಜ್ಞಾನ ವಿಭಾಗದ ಕ್ಷಮಾ ಸಾಂಸ್ಕೃತಿಕ ಕಾರ್‍ಯಕ್ರಮದ ನಿರೂಪಣೆಯನ್ನು ನಡೆಸಿದರು.
ಕಾರ್‍ಯಕ್ರಮದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅನ್ವಿತಾ ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here