





ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ವ್ಯಕ್ತಿಯೊಬ್ಬರ ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಕೂಡೂರು ದಿ. ಕೃಷ್ಣ ಭಟ್ ರವರ ಮಾಲಕತ್ವದ ಗೋಡೌನ್ ಇದಾಗಿದ್ದು, ಸೆ.8 ರಂದು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಸುಮಾರು 3 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ಅರಿತ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಕಿ ಅವಘಡ ಸಂಭವಿಸಲು ನಿಖರ ಮಾಹಿತಿ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.


ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಹಕಾರದಿಂದ ಬೆಂಕಿಯನ್ನು ನಂದಿಸಲಾಯಿತು.














