ಪ್ರವೀಣ್ ನೆಟ್ಟಾರು ಪತ್ನಿ ನೂತನರಿಗೆ ಸಿ.ಎಂ ಕಚೇರಿಯಲ್ಲಿ ಉದ್ಯೋಗ:ಬೊಮ್ಮಾಯಿ ಘೋಷಣೆ

0

ಪುತ್ತೂರು: ಜು.26ರಂದು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನರಿಗೆ ತನ್ನ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಬೊಮ್ಮಾಯಿಯವರು ಬಿಜೆಪಿ ನೇತೃತ್ವದ ಸರ್ಕಾರದ ಮೂರು ವರ್ಷಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿ ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ಪಕ್ಷದಲ್ಲಿ ಕಾರ್ಯಕರ್ತನಿಗೂ ಸಚಿವನಿಗೂ ಸಮಾನತೆ ಇದೆ.ಕಾರ್ಯಕರ್ತರ ಜೊತೆ ನಾವಿದ್ದೇವೆ. ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿರುವ ನಮ್ಮ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ನನ್ನ ಆಫೀಸಿನಲ್ಲೇ ಕೆಲಸ ಕೊಡಿಸುತ್ತೇನೆ’ಎಂದು ಮಹತ್ವದ ಘೋಷಣೆ ಮಾಡಿದರು.

LEAVE A REPLY

Please enter your comment!
Please enter your name here