





ನೆಲ್ಯಾಡಿ: ಜೆಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್ ಆಶ್ರಯದಲ್ಲಿ 39ನೇ ವರ್ಷದ ಜೇಸಿ ಸಪ್ತಾಹ ‘ನಮಸ್ತೆ-2022’ರ ಅಂಗವಾಗಿ ಸಾರ್ವಜನಿಕ ಕ್ರೀಡೋತ್ಸವ ಸೆ.11ರಂದು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು.



ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಕೆ.ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆ ಎಲ್ಲರನ್ನೂ ಒಗ್ಗೂಡಿಸುವ, ಮನಸ್ಸಿಗೆ ಮುದ ನೀಡುವ, ದೇಹಕ್ಕೆ ಉಲ್ಲಾಸವನ್ನು ನೀಡುತ್ತದೆ. ಕ್ರೀಡಾಕೂಟಗಳನ್ನು ಆಯೋಜಿಸಿ ಅದರಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮಲ್ಲಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಲಭಿಸುತ್ತದೆ. ತಾನು ಸಂತೋಷ ಪಡುವ ಮೂಲಕ ಮತ್ತೊಬ್ಬನಿಗೂ ಸಂತೋಷವನ್ನು ಹಂಚುವುದೇ ಕ್ರೀಡೆ ಎಂದು ಹೇಳಿದರು.
ಜೆಸಿಐ ಅಧ್ಯಕ್ಷೆ ಜಯಂತಿ ಬಿ.ಎಂ.ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ, ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಎಸ್ಡಿಎಂಸಿ ಅಧ್ಯಕ್ಷ ಬಿನೋಜ್, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ., ಜೆಸಿಐ ಕಾರ್ಯದರ್ಶಿ ಪ್ರವೀಣ್ಕುಮಾರ್, ನಿಕಟಪೂರ್ವಾಧ್ಯಕ್ಷ ಗಿರೀಶ್ ಡಿ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಸಿಐ ಪೂರ್ವಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ವಿವಿಧ ಕ್ರೀಡಾಕೂಟ ನಡೆಯಿತು.





ಸನ್ಮಾನ:
ಪ್ರಾಂಶುಪಾಲರಾಗಿರುವ ಏಲಿಯಾಸ್ ಎಂ.ಕೆ.ರವರು ಸಾವಿರಾರು ಮಂದಿಗೆ ಆಧಾರ್ ಕಾರ್ಡ್ಗೆ ಸಂಬಂಧಿಸಿದ ದೃಢೀಕರಣ ನೀಡುವ ಮೂಲಕ ಮಾಡಿರುವ ಅವರ ಸಾಮಾಜಿಕ ಸೇವೆ ಗುರುತಿಸಿ ಜೆಸಿಐ ವತಿಯಿಂದ ಶಾಲು ಹಾಕಿ, ಸ್ಮರಣಿಕೆ ನೀಡಿ ಈ ಸಂದರ್ಭದಲ್ಲಿ ಗೌರವಿಸಲಾಯಿತು.










