ಸೆ. 26 ರಿಂದ ಅ. 10 ದ.ಕ ಜಿಲ್ಲೆಯಲ್ಲಿ ದಸರಾ ರಜೆ ಘೋಷಿಸಲು ದ.ಕ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವರ ಸೂಚನೆ

0

ಪುತ್ತೂರು:ದ.ಕ ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಸೆ.26ರಿಂದ ಅ.10ರ ತನಕ ದಸರಾ ರಜೆ ನೀಡುವಂತೆ ದ.ಕ ಜಿಲ್ಲಾಧಿಕಾರಿಯವರಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸೂಚನೆ ನೀಡಿದ್ದಾರೆ.

ಕೆಲವು ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಽಸಿದ ಜಿಲ್ಲಾಧಿಕಾರಿಗಳು / ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಽಕಾರಿಗಳಿಗೆ ಬದಲಾವಣೆಗಳನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ ಅ10ರವರೆಗೆ ದಸರಾ ರಜೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವುದು ಹಾಗೂ ಅ.2ರಂದು ಮಹಾತ್ಮ ಗಾಂಽ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಶಿಕ್ಷಣ ಸಚಿವರು ಜಿಲ್ಲಾಽಕಾರಿಗಳಿಗೆ ಆದೇಶದಲ್ಲಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here