ಪುತ್ತೂರು: ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ಧೇಶದಿಂದ ಕೆಯ್ಯೂರು ಗ್ರಾಮ ಪಂಚಾಯತ್ನ 2021-22 ನೇ ಸಾಲಿನ ಜಮಾಬಂಧಿಯ ಸಭೆಯು ಸೆ. 13ರಂದು ಗ್ರಾಮ ಪಂಚಾಯತ್ ಕಛೇರಿಯ ಸಭಾ ಭವನದಲ್ಲಿ ನಡೆಯಿತು.
ಸಾಮಾಜಿಕ ಅರಣ್ಯದ ಉಪ ಅರಣ್ಯ ಸಂರಕ್ಷಾಧಿಕಾರಿ ಸುಬ್ಬಯ್ಯ ನಾಯ್ಕ್ ಜಮಾಬಂಧಿ ಅಧಿಕಾರಿಯಾಗಿ ಆಗಮಿಸಿದ್ದರು. ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ ಸಭಾಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಬ್ಬಂದಿ ಉದಯ ರವಿ, ಗ್ರಾಪಂ ಉಪಾಧ್ಯಕ್ಷೆ ಗಿರಿಜಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದ್ದರು.