ಪುತ್ತೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಪಂಚಾಯತ್ನ 2022-23 ನೇ ಸಾಲಿನ ಪ್ರಥಮ ಹಂತದ ಮತ್ತು 2021-22 ನೇ ಸಾಲಿನ ಕೇಂದ್ರ 14 ನೇ ಮತ್ತು 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಸೆ.15 ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ| ಪ್ರಸನ್ನ ಕುಮಾರ್ ಹೆಬ್ಬಾರ್ರವರು ಸಭಾಧ್ಯಕ್ಷತೆ ವಹಿಸಿದ್ದರು. ತಾಲೂಕು ಸಂಯೋಜಕ ಚಂದ್ರಶೇಖರ್ ಬಿ ಮತ್ತು ಐಇಇಸಿ ಸಂಯೋಜಕ ಭರತ್ರವರುಗಳು ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅನುಷ್ಠಾನ ಇಲಾಖೆಯ ಆಕಾಂಕ್ಷ ರೈ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಜಯಂತಿ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಜಾನಕಿ, ಗುಲಾಬಿ, ಕೇಶವ , ಮೋಹನ್ ಸಹಕರಿಸಿದ್ದರು.
ಉದ್ಯೋಗ ಖಾತರಿ ಯೋಜನೆಯಡಿ 3606 ಮಾನವ ದಿನಗಳ ಕಾಮಗಾರಿ ನಡೆದಿದ್ದು ಕೂಲಿ ಮೊತ್ತ ಒಟ್ಟು ರೂ.10,46,144, ಸಾಮಾಗ್ರಿ ಮೊತ್ತ ರೂ.2,06,960 ಸೇರಿ ಒಟ್ಟು 12,53,104 ರೂ.ಗಳ ಕೆಲಸ ನಡೆದಿದೆ.