ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ 2022 ಮತ್ತು 2023 ನೇ ಸಾಲಿನ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 14 ಮತ್ತು 15 ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆ ಸೆ 17 ರಂದು ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇದರ ಮೇಲ್ವಿಚಾರಕಿ ಆರತಿ ವಿ ನೋಡೆಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ತಾಲೂಕು ಪಂಚಾಯತ್ ತಾಂತ್ರಿಕ ಸಂಯೋಜಕ ಚಂದ್ರಶೇಖರ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ತಾ.ಪಂ ತಾಂತ್ರಿಕಅ ಅಭಿಯಂತರರು ವಿನೋದ್, ಪಿ.ಡಿ.ಓ ಪದ್ಮಾ ಕುಮಾರಿ ಉಪಸ್ಥಿತರಿದ್ದರು. ಅಮ್ಮಣ್ಣ ರೈ ಡಿ ಪಾಪೆಮಜಲು, ಲೋಕೇಶ್ ರೈ ಅಮೈ, ಇಕ್ಬಾಲ್ ಹುಸೇನ್ ಕೌಡಿಚ್ಚಾರು ಚರ್ಚೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಫಲಾನುಭವಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂಚಾಯತ್ ಕಾರ್ಯದರ್ಶಿ ಶಿವರಾಮ ಮೂಲ್ಯ ಸ್ವಾಗತಿಸಿ ಸಿಬ್ಬಂದಿ ಪ್ರಭಾಕರ ವಂದಿಸಿದರು. ಉದ್ಯೋಗ ಖಾತರಿ ಯೋಜನೆಯಡಿ 5033 ಮಾನವ ದಿನಗಳ ಕಾಮಗಾರಿ ನಡೆದಿದ್ದು, ಕೂಲಿ ಮೊತ್ತ ರೂ 14,54,767-00 ಸಾಮಾಗ್ರಿ ಮೊತ್ತ ರೂ 1,45,388-00 ಕೆಲಸ ನಡೆದು ಒಟ್ಟುರೂ 16,00155-00 ಆಗಿದೆ.14-15 ನೇ ಹಣಕಾಸು ಯೋಜನೆಯ ಒಟ್ಟು ಕಾಮಗಾರಿ 41 ಖರ್ಚಾದ ಹಣ ರೂ 33,16,558-00 ಆಗಿರುತ್ತದೆ.