ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಹಂತದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 2021 – 22 ನೇ ಸಾಲಿನ 14 ಮತ್ತು 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಸೆ.17 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ನರೇಗಾದ ತಾಲೂಕು ಸಂಯೋಜಕ ಪ್ರವೀಣ್ ಕುಮಾರ್ ವರದಿ ಸಾಲಿನ ಕಾಮಗಾರಿಗಳ ವಿವರ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ, ಸದಸ್ಯ ಮುರಳೀಕೃಷ್ಣ ಮುಂಡೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಲ ಜೀವನ್ ಮಿಷನ್ ಬಗ್ಗೆ ಸಂಯೋಜಕ ರವೀಶ್ ಮಾಹಿತಿ ನೀಡಿದರು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ನೊಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಿಡಿಒ ಸಂಧ್ಯಾಲಕ್ಷ್ಮೀ ಸ್ವಾಗತಿಸಿ ವಂದಿಸಿದರು. ನರೇಗಾದ ಸಹಾಯಕರಾದ ಯಶ್ಮೀತಾ, ಸುಪ್ರಿಯಾ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು. ಸಿಬ್ಬಂದಿಗಳು ಸಹಕರಿಸಿದರು.