ಕಾಣಿಯೂರು: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು, ಇದರ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಕಾಣಿಯೂರು ಗ್ರಾಮ ಸಮಿತಿ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಘಟಕ ಕಾಣಿಯೂರು ಗ್ರಾಮ ಇದರ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘ ಗುಂಪುಗಳ ರಚನೆಯ ಬಗ್ಗೆ ಸಮಾಲೋಚನಾ ಸಭೆಯು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.
ಮಾಜಿ ಉಪ ನಿವಾಸಿ ಆಯುಕ್ತ ಕರ್ನಾಟಕ ಸರ್ಕಾರ ಮತ್ತು ನಿವೃತ್ತ ಉಪ ಕಾರ್ಯದರ್ಶಿ ಭಾರತ ಸರಕಾರ ಎಂ. ಎನ್. ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಹಿಸಿದ್ದರು.
ಸಭೆಯಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಒಕ್ಕಲಿಗ ಸ್ವಸಹಾಯ ಟ್ರಸ್ಟಿನ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ ಗೌಡ, ಚಾರ್ವಾಕ ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಸವಣೂರು ವಲಯ ಉಸ್ತುವಾರಿ ಚಂದ್ರಶೇಖರ ಗೌಡ ಬರೆಪ್ಪಾಡಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತಾರು, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರು ವಸಂತ ಗೌಡ ಪರ್ಲೋಡಿ, ಊರ ಗೌಡರು ರೋಹಿತ್ ಗೌಡ ಅನಿಲ, ಊರ ಗೌಡರು ವಸಂತ ಗೌಡ ಕಂಪ ಉಪಸ್ಥಿತರಿದ್ದರು. ಪ್ರೇರಕರಾದ ಉದಯರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು,ಒಕ್ಕಲಿಗ ಸ್ವ ಸಹಾಯ ಟ್ರಸ್ಟಿನ ಮೇಲ್ವಿಚಾರಕ ವಿಜಯ್ ಕುಮಾರ್ ಒಕ್ಕಲಿಗ ಸ್ವಸಹಾಯ ಸಂಘಗಳ ಬಗ್ಗೆ ಮಾಹಿತಿ ನೀಡಿದರು. ಕಾಣಿಯೂರು ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿ, ಪರಮೇಶ್ವರ ಗೌಡ ಅನಿಲ ವಂದಿಸಿದರು.