ಕಡಬ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಡಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನ.20ರಂದು ಬಿಳಿನೆಲೆಯಲ್ಲಿ ಕಡಬ ತಾಲೂಕು 3 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರಗಲಿರುವುದು ಈ ಬಗ್ಗೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ 15ರಂದು ಪೂರ್ವಭಾವಿ ಸಭೆ ನಡೆಯಿತು.
ಸಮ್ಮೇಳನದ ಸ್ವಾಗತ ಸಮಿತಿ ರಚಿಸಿ ಗೌರವಾಧ್ಯಕ್ಷರಾಗಿ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರನ್ನ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಶ್ರೀಕೃಷ್ಣ ಶರ್ಮ ಸುಬ್ರಹ್ಮಣ್ಯ, ಅಧ್ಯಕ್ಷರಾಗಿ ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ, ಕಾರ್ಯಾಧ್ಯಕ್ಷರಾಗಿ ಸತೀಶ್ ಎರ್ಕ ಬಿಳಿನೆಲೆ, ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯಣ್ಣಗೌಡ ಅಮೈ ಕೋಶಾಧ್ಯಕ್ಷರಾಗಿ ಶಾರದಾ ಕೇಶವ ಗೌಡ ಪುತ್ತಿಲ, ಕಾರ್ಯದರ್ಶಿಯಾಗಿ ವಿಜಯಕುಮಾರ ನಡುತೋಟ ಬಿಳಿನೆಲೆ ಕೈಕಂಬ, ಜತೆ ಕಾರ್ಯದರ್ಶಿಯಾಗಿ ಸರೋಜಿನಿ ಜಯಪ್ರಕಾಶ್ ಮೋಂಟಡ್ಕ, ಉಪಾಧ್ಯಕ್ಷರುಗಳು, ವಿವಿಧ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು .
ವೇದಿಕೆಯಲ್ಲಿ ಕನ್ನಡ ಕಡಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೇಸಪ್ಪ ರೈ, ನಿಕಟಪೂರ್ವ ಅಧ್ಯಕ್ಷ ಪಣೆಮಜಲು ಜನಾರ್ದನ ಗೌಡ, ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ್ , ಕೆ ನಾರಾಯಣ ಭಟ್ ರಾಮಕುಂಜ, ವಸಂತ್ ಕುಮಾರ್ ರಾವ್ ರಾಮಕುಂಜ, ಶ್ರೀ ಕೃಷ್ಣ ಶರ್ಮ ಸುಬ್ರಹ್ಮಣ್ಯ, ಬಿಳಿನೆಲೆ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಎರ್ಕ ಹಾಗೂ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಣಪತಿ ಭಟ್, ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು