ಬಿ.ಎಂ.ಎಸ್. ಜಿಲ್ಲಾಧ್ಯಕ್ಷರಾಗಿ ನ್ಯಾಯವಾದಿ ಅನಿಲ್ ಕುಮಾರ್ ಆಯ್ಕೆ

0

 

ಪುತ್ತೂರು: ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಯುವ ನ್ಯಾಯವಾದಿ, ಯುವ ಸಂಘಟಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಭಾರತೀಯ ಮಜ್ಧೂರು ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಅನಿಲ್ ಕು‌ಮಾರ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ಬೆಳೆದು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು‌ ಸಾಮಾಜಿಕವಾಗಿ ತೊಡಗಿಸಿಕೊಂಡವರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿಯಾಗಿ ಪೂರ್ಣಾವಧಿ ಕಾರ್ಯಕರ್ತರಾಗಿ, ಹಾಸನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ, ಧರ್ಮ ಜಾಗರಣ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ವಿಧಿ ಪ್ರಮುಖರಾಗಿ ಜವಾಬ್ದಾರಿಯನ್ನು ನಿರ್ವಹಿಸಿರುವ ಉಪ್ಪಿನಂಗಡಿ ದಡ್ಡು ನಿವಾಸಿ ಅನಿಲ್ ಕುಮಾರ್ ಪ್ರಸ್ತುತ ಬೆಳ್ತಂಗಡಿಯಲ್ಲಿ ವಕೀಲ ಕಚೇರಿಯನ್ನು ಹೊಂದಿದ್ದಾರೆ.

LEAVE A REPLY

Please enter your comment!
Please enter your name here