ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಜ್ಜಾರಡ್ಕ ಅಂಗನವಾಡಿ ಕೇಂದ್ರದಲ್ಲಿ ಗಿಡ ನೆಡುವ ಅಭಿಯಾನ

0

ಪುತ್ತೂರು: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಗಿಡ ನೆಡುವ ಅಭಿಯಾನ ಸೆ.20 ರಂದು ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು. ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ವಿಠಲ ಪೂಜಾರಿ ಐರೋಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ಮೋರ್ಚಾದ ದ.ಕ ಜಿಲ್ಲಾ ಅಧ್ಯಕ್ಷ ಆರ್.ಸಿ ನಾರಾಯಣ, ಬಿ.ಜೆ.ಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ, ಪುತ್ತೂರು ಗ್ರಾಮಾಂತರ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸುನೀಲ್ ದಡ್ಡು, ಹಿಂದುಳಿದ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುರೇಶ್ ಆಳ್ವ ಈಶ್ವರಮಂಗಲ,ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಕುಮಾರ್ ಕೋರಂಗ, ಅರಿಯಡ್ಕ ಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ರೈ ಪಾಪೆಮಜಲು, ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಸುಬ್ರಹ್ಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪಂಚಾಯತ್ ಸದಸ್ಯರಾದ ಹರೀಶ್ ರೈ ಜಾರತ್ತಾರು , ರಾಜೇಶ್ ಮಣಿಯಾಣಿ ತ್ಯಾಗ ರಾಜೆ , ಪ್ರಗತಿ ಪರ ಕೃಷಿಕ ಸುಭಾಷ್ ರೈ ಕಡಮಜಲು,ರವಿ ಮಜ್ಜಾರು,ಮಜ್ಜಾರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಸಂತಿ ಮುಂತಾದವರು ಉಪಸ್ಥಿತರಿದ್ದರು.ಹಿಂದುಳಿದ ಮೋರ್ಚಾದ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಸದಾನಂದ ಮಣಿಯಾಣಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪ್ರಭು ವಂದಿಸಿದರು.

LEAVE A REPLY

Please enter your comment!
Please enter your name here