








ಉಪ್ಪಿನಂಗಡಿ: ಉದನೆಯ ಸಂತ ಅಂತೋಣಿ ಪ್ರೌಢ ಶಾಲೆಯಲ್ಲಿ ಜರುಗಿದ ಉಪ್ಪಿನಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಏಳು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದು ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.












