ಪುತ್ತೂರು: ನವರಾತ್ರಿ ಪ್ರಯುಕ್ತ ಪುತ್ತೂರು ಶ್ರೀಮಹಾಮಾಯಾ ದೇವಸ್ಥಾನದಲ್ಲಿ ಸೆ.26ರಿಂದ ಅ.5ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದೆ.
ಪ್ರತಿದಿನ ಮಧ್ಯಾಹ್ನ 1.30ಕ್ಕೆ ಮಹಾಪೂಜೆ, ರಾತ್ರಿ 9ಕ್ಕೆ ದುರ್ಗಾನಮಸ್ಕಾರ ಪೂಜೆ ಮತ್ತು 9.30ಕ್ಕೆ ರಾತ್ರಿ ಪೂಜೆ ನಡೆಯಲಿದೆ. ಅ.3ರಂದು ದುರ್ಗಾಷ್ಟಮಿ, ಅ.4ರಂದು ಮಹಾನವಮಿ ಚಂಡಿಕಾಯಾಗ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.