





* ಅ.2 ಆಯುಧ ಪೂಜೆ
* ಅ.4 ಸಭಾ ಕಾರ್ಯಕ್ರಮ, ತುಳು ನಾಟಕ


ಪುತ್ತೂರು:ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.26ರಿಂದ ಪ್ರಾರಂಭಗೊಂಡು ಅ.4ರ ತನಕ ವೇ.ಮೂ ಹರಿಪ್ರಸಾದ್ ಭಟ್ ಬನಾರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.






ಸೆ.26ರಂದು ಬೆಳಿಗ್ಗೆ ಮಹಾಗಣಪತಿ ಹವನದೊಂದಿಗೆ ನವರಾತ್ರಿ ಉತ್ಸವಗಳಿಗೆ ಚಾಲನೆ ದೊರೆಯಲಿದೆ. ಪ್ರತಿದಿನ ಸಂಜೆ 7 ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ರಾತ್ರಿ 8.45ಕ್ಕೆ ಶ್ರೀ ದೇವಿಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅ.3ರಂದು ಸಂಜೆ 5 ಗಂಟೆಯಿಂದ ಆಯುಧ ಪೂಜೆ ನಡೆಯಲಿದೆ.
ಅ.4 ಸಭಾ ಕಾರ್ಯಕ್ರಮ, ತುಳು ನಾಟಕ:
ನವರಾತ್ರಿ ಉತ್ಸವದಲ್ಲಿ ಕೊನೆಯ ದಿನವಾದ ಅ.4ರಂದು ಬೆಳಿಗ್ಗೆ ಭಜನಾ ಸಂಕೀರ್ತನೆ, 11 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸವಣೂರು ವಿಶ್ವ ಹಿಂದೂ ಪರಿಷತ್ನ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಹಾಗೂ ಖ್ಯಾತ ವೈದ್ಯ ಡಾ.ಎಂ.ಕೆ ಪ್ರಸಾದ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಶ್ರೀ ದೇವಿಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳಿಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಗಮ್ ಬ್ರರ್ಸ್ ನೃತ್ಯ ಸಂಸ್ಥೆ ಬೊಳುವಾರು ಇವರಿಂದ `ನತ್ಯ ವೈವಿದ್ಯ ಸಂಗಮ’ ನಡೆದ ಬಳಿಕ ‘ಇತ್ತೆ ಪಾತೆರ್ಲೆ’ ಎಂಬ ತುಳು ಹಾಸ್ಯ ನಾಟಕ ನಡೆಯಲಿದೆ ಎಂದು ಭಜನಾ ಮಂದಿರದ ಪ್ರಕಟಣೆ ತಿಳಿಸಿದೆ.


            





