













ಪುತ್ತೂರು : 2019 ರಲ್ಲಿ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಸಮೀಪ ನಡೆದ ಶೂಟೌಟ್ ಪ್ರಕರಣದ ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ವಿಟ್ಲದ ಕೇಪು ಗ್ರಾಮದ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಬಂಧಿತ ಆರೋಪಿ. ಹನೀಫ್ ಅವರು 2019 ರಲ್ಲಿ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಕೆ ಅಬ್ದುಲ್ ಖಾದರ್ ಎಂಬವರಿಗೆ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ಬಳಿಕ ನ್ಯಾಯಾಲಯದಲ್ಲಿ ಜಾಮೀನು ಪಡೆದು ವಿಚಾರಣೆ ವೇಳೆ ತಲೆಮರೆಸಿಕೊಂಡಿದ್ದರು. ಸುಮಾರು ಒಂದು ವರ್ಷ ದಿಂದ ವಾರಂಟಿನಲ್ಲಿ ತಲೆ ಮರೆಸಿ ಕೊಂಡು ಬೊಂಬಾಯಿಯಲ್ಲಿದ್ದ ಹನೀಫ್ ಅವರು ಒಂದು ವಾರದ ಹಿಂದೆ ವಿಟ್ಲಕ್ಕೆ ಬಂದ ಕುರಿತು ಮಾಹಿತಿ ಪಡೆದ ಪುತ್ತೂರು ಪೊಲೀಸರು ಎಸ್ಪಿ ಋಷಿಕೇಶ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಮತ್ತು ಎಸ್ ಐ ಶ್ರೀಕಾಂತ್ ರಾಥೋಡ್ ನೇತೃತ್ವದಲ್ಲಿ ಹೆಡ್ ಕಾನ್ ಸ್ಟೇಬಲ್ ಪರಮೇಶ್ವರ, ಕುಮಾರ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.









