ಪುತ್ತೂರು: ನವದುರ್ಗಾರಾಧನೆ ಸಮಿತಿ ವತಿಯಿಂದ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ 20 ನೇ ವರ್ಷದ ಪುತ್ತೂರು ದಸರಾ ಮಹೋತ್ಸವ ಸೆ.26 ರಂದು ಉದ್ಘಾಟನೆಗೊಂಡಿತು.
ಬೆಳಿಗ್ಗೆ ಗಣಪತಿ ಸಹಿತ ನವದುರ್ಗೆಯರ ಪ್ರತಿಷ್ಠೆಯನ್ನು ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರು ವೈದಿಕ ಕಾರ್ಯಕ್ರಮ ನಿರ್ವಹಿಸಿದರು. ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ಅವರು ಭಗವಧ್ವಜಾರೋಹಣ ಮಾಡಿದರು. ದಸರಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಬನ್ನೂರು, ಜಯಂತ ಶೆಟ್ಟಿ ಕಂಬಲತ್ತಡ್ಡ, ನಿವೃತ ಉಪವಲಯ ಅರಣ್ಯಾಧಿಕಾರಿ ಕೃಷ್ಣಪ್ಪ, ಸಮಿತಿ ಕಾರ್ಯಾಧ್ಯಕ್ಷ ಯು ಲೊಕೇಶ್ ಹೆಗ್ಡೆ, ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಸಾಂಸ್ಕೃತಿ ಸಮಿತಿಯ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಪ್ರಕಾಶ್, ಉಮೇಶ್, ಲತಾ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.