ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

0

ರಾಷ್ಟ್ರ ಧ್ವಜ, ಕನ್ನಡ ಪರಿಷತ್ತು ಧ್ವಜ, ಸಮ್ಮೇಳನ ಧ್ವಜಾರೋಹಣ

ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಗರಸಭೆ ವ್ಯಾಪ್ತಿಯಲ್ಲಾಗಲಿ – ಕೆ.ಜೀವಂಧರ್ ಜೈನ್

ಪುತ್ತೂರು: ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆ.29ರಂದು ಬಪ್ಪಳಿಗೆ ಅಂಬಿಕಾ ಸಮೂಹ ಸಂಸ್ಥೆಗಳ ಆವರಣದಲ್ಲಿ ರಾಷ್ಟ್ರಧ್ವಜ, ಕನ್ನಡ ಪರಿಷತ್ತು ಧ್ವಜ ಮತ್ತು ಸಮ್ಮೇಳನದ ಧ್ವಜಾರೋಹಣದ ಮೂಲಕ ಅದ್ದೂರಿಯ ಚಾಲನೆ ನೀಡಲಾಯಿತು.

ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಗರಸಭೆ ವ್ಯಾಪ್ತಿಯಲ್ಲಾಗಲಿ:

ಬಪ್ಪಳಿಗೆ ಅಂಬಿಕಾ ಸಮೂಹ ಸಂಸ್ಥೆಗಳ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಮಾತನಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಗರಸಭೆ ವ್ಯಾಪ್ತಿಯಲ್ಲಿ ನಡೆದಂತೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವೂ ನಗರಸಭೆ ವ್ಯಾಪ್ತಿಯಲ್ಲಿ ನಡೆಯಲಿ. ಪುತ್ತೂರು ನಗರಸಭೆ ಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್ ಕನ್ನಡ ಪರಿಷತ್ತಿನ ಧ್ವಜಾರೋಹಣ ಮಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಸಮ್ಮೇಳನದ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷ ಡಾ| ಶ್ರೀಧರ್ ಹೆಚ್.ಜಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ರಾಜಶ್ರೀ ನಟ್ಟೋಜ, ತಾಲೂಕು ಕನ್ನಡ ಸಾಹಿತ್ಯ ಪರಷತ್‌ನ ನಿಕಟಪೂರ್ವ ಅಧ್ಯಕ್ಷರೂ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಬಿ.ಐತ್ತಪ್ಪ ನಾಯ್ಕ್, ಹಿರಿಯರಾದ ಬಿ.ಪುರಂದರ ಭಟ್, ಸಾಹಿತಿ ಪ್ರೊ. ವಿ.ಬಿ.ಅರ್ತಿಕಜೆ, ಸುರೇಶ್ ಶೆಟ್ಟಿ, ಡಾ| ಹರ್ಷಕುಮಾರ್ ರೈ ಮಾಡಾವು, ಹರಿಣಿಪುತ್ತೂರಾಯ, ಡಾ| ಪೀಟರ್‌ವಿಲ್ಸನ್ ಪ್ರಭಾಕರ್, ಆಶಾ ಬೆಳ್ಳಾರೆ, ವಿಜಯಕುಮಾರ್ ಮೊಳೆಯಾರು, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಮತ್ತು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿ, ಅಂಬಿಕಾ ಬಾಲ ವಿದ್ಯಾಲಯದ ಶಿಕ್ಷಕಿ ಸುಜಯ ಎ.ಎಸ್ ವಂದಿಸಿದರು. ಪ್ರಾಂಶುಪಾಲೆ ಸುಜನಿ ಎಂ. ಬೋರ್ಕರ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಪ್ರಿಯಾಶ್ರೀ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here