





ಕಾಣಿಯೂರು: ದ. ಕ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ಧೂರು ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.


ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಗೂ ಮೇಲು ಉಸ್ತುವಾರಿ ಸಮಿತಿ ಅಧ್ಯಕ್ಷ ವಸಂತ ದಲಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೊಲ್ಪೆ, ಕೀರ್ತಿ ಕುಮಾರಿ ಅಂಬುಲ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಕುಸುಮಾವತಿ ಹಾಗೂ ಸದಸ್ಯರು ಮತ್ತು ಮಕ್ಕಳ ಪೋಷಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಶಾರದಾ ಪೂಜಾ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅಕ್ಷರಭ್ಯಾಸ ನೆರವೇರಿಸಿದರು. ಶಾಲಾ ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ, ಸಹ ಶಿಕ್ಷಕಿ ಸುರೇಖಾ ವಂದಿಸಿದರು.







            





