ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಕೆಮ್ಮಾರ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಅ.2ರಂದು ಆಚರಿಸಲಾಯಿತು.


ಕೆಮ್ಮಾರ ಶಾಲಾ ವಿದ್ಯಾರ್ಥಿಗಳು ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಾಧನೆಯ ಮತ್ತು ಅಹಿಂಸಾ ರೀತಿಯ ಹೋರಾಟಗಳ ಬಗ್ಗೆ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕೆಮ್ಮಾರ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಜಯಶ್ರೀ ಎಂ., ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್. ಬಿ.ಕೆ. ವಹಿಸಿದ್ದರು. ಗ್ರಾ.ಪಂ. ಸದಸ್ಯ ಹೇಮಂತ್, ಎಸ್‌ಡಿಎಂಸಿ ಜಿಲ್ಲಾ ಕಾರ್ಯದರ್ಶಿ ಸೆಲಿಕತ್, ಸಮಿತಿ ಸದಸ್ಯರಾದ ವಾಮನ ಬರಮೇಲು, ಪದ್ಮನಾಭ ಶೆಟ್ಟಿ ಬಡಿಲ, ಶಿಕ್ಷಕರಾದ ವೆಂಕಟ್ರಮಣ ಭಟ್, ಸುಮನಾ, ಜುನೈದ್, ಶಹನಾಝ್, ರೈಹಾನ ಸೇರಿದಂತೆ ಪೋಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಮೆಹನಾಝ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದಿಸಿದರು. ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

 

LEAVE A REPLY

Please enter your comment!
Please enter your name here