ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ ಹಾಗೂ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಅ.3ರಂದು ನಡೆಯಿತು.
ಕಡಬ ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಡಾ| ವೇದಾವತಿ ಬಿ.,ರವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅದನ್ನು ಉತ್ತಮವಾಗಿ ಪೋಷಿಸಿದಲ್ಲಿ ವಿಶ್ವಮಾನವರಾಗಲು ಸಾಧ್ಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ನಿರ್ದೇಶಕರಾದ ರೆ|ಫಾ| ಮೆಲ್ವಿನ್ ಮ್ಯಾಥ್ಯೂ ಒಐಸಿಯವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಯಕರಾಗಿ ಮೂಡಿಬರಬೇಕು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಜಿ ಕೆ ತೋಮಸ್‌ರವರು ವಿದ್ಯಾರ್ಥಿ ಪರಿಷತ್ತಿನ ನಾಯಕರುಗಳಿಗೆ ಪ್ರಮಾಣ ವಚನ ಬೋಧಿಸಿದರು. ತರಬೇತಿ ಅಧಿಕಾರಿ ಜೋನ್ ಪಿ.ಎಸ್., ಶೈಕ್ಷಣಿಕ ವರ್ಷದ ಕಾರ್ಯದರ್ಶಿ ಶಿವಾನಂದ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸುನಿಲ್ ಜೋಸೆಫ್ ಸ್ವಾಗತಿಸಿ, ಕಿರಿಯ ತರಬೇತಿ ಅಧಿಕಾರಿ ವರ್ಗೀಸ್ ಎನ್.ಟಿ. ವಂದಿಸಿದರು. ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿನಿಯರಾದ ರಕ್ಷಾ ಹಾಗೂ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.