ಬುಡೋಳಿ: ಕಂಟೈನರ್ ಲಾರಿ ಪಲ್ಟಿ – ಚಾಲಕ ಅಪಾಯದಿಂದ ಪಾರು

0

ವಿಟ್ಲ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದ ಬಗ್ಗೆ ವರದಿಯಾಗಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಬುಡೋಳಿ ಸಮೀಪ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದ ಸಂದರ್ಭ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here