ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸವಣೂರು ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣೂರು, ಆರೇಲ್ತಡಿ, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು, ಕಾಣಿಯೂರು, ಚಾರ್ವಾಕ, ನಾಣಿಲ, ಪುಣ್ಚತ್ತಾರು ಇವುಗಳ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಧನ ಸಮಾವೇಶ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಶಾಂತಿಮೊಗರು ಶ್ರಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಅ 8ರಂದು ನಡೆಯಲಿದೆ.
ಬೆಳಿಗ್ಗೆ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸವಣೂರು ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ವಲಯಾಧ್ಯಕ್ಷ ವೇಣುಗೋಪಾಲ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದು, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್‌ನ ನಿರ್ದೇಶಕ ಪ್ರವೀಣ್ ಕುಮಾರ್, ಸವಣೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಸವಣೂರು ಗ್ರಾ.ಪಂ.ಅಧ್ಯಕ್ಷ ರಾಜೀವಿ ಶೆಟ್ಟಿ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಯೋಜನೆಯ ಸವಣೂರು ವಲಯ ಒಕ್ಕೂಟಗಳ ಪದಾಧಿಕಾರಿಗಳು ತಿಳಿಸಿದ್ದಾರೆ.