ಸಾಮೂಹಿಕ ಚಂಡಿಕಾ ಹೋಮ – ದರ್ಬೆಯಲ್ಲಿ ಶೋಭಾಯಾತ್ರೆಗೆ ಚಾಲನೆ
ಪುತ್ತೂರು: ನವದುರ್ಗಾರಾಧನಾ ಸಮಿತಿ ವತಿಯಿಂದ ಕಳೆದ 11 ದಿನಗಳಿಂದ ಸಂಪ್ಯ ಉದಯಗಿರಿ ಕ್ಷೇತ್ರದಲ್ಲಿ ಆರಾಧಿಸಲ್ಪಡುತ್ತಿರುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾಯಾತ್ರೆ ‘ಪುತ್ತೂರು ದಸರಾ’ ಅ.7ರಂದು ಸಂಜೆ ನಡೆಯಿತು.
ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಪ್ರಸಾದ ಬಳಿಕ ಸಂಜೆ ವಿಜೃಂಭಣೆಯ ಪುತ್ತೂರು ದಸರಾ ಮಹೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ದರ್ಬೆ ಅಶ್ವಿನಿ ವೃತ್ತದ ಬಳಿ ಶೋಭಾಯಾತ್ರೆಯ ಉದ್ಘಾಟನೆಯನ್ನು ದಸರಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ದಸರಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಮಹೇಶ್ ಕಜೆ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಪರ್ಲಡ್ಕ, ಸಂಚಾಲಕ ಪ್ರೀತಂ ಪುತ್ತೂರಾಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.