ಪುತ್ತೂರು: ಬೀದಿ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿರುವ ಮಹಿಳೆಯೊಬ್ಬರು ಅನಾರೋಗ್ಯದಿಂದ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಕೆ ಮಾರಾಟಕ್ಕಿಟ್ಟಿದ್ದ ತರಕಾರಿಗಳಿಗೆ ವಾರಿಸುದಾರರಿಲ್ಲದೆ ಬೀದಿ ಬದಿಯಲ್ಲಿ ಕೊಳೆಯುತ್ತಿರುವ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಮಾಯಿದೆ ದೇವುಸ್ ಚರ್ಚ್ ಗೇಟ್ ಬಳಿ ತರಕಾರಿ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದರು. ತಕ್ಷಣ ಆಕೆಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತ ಆಕೆ ಮಾರಾಟ ಮಾಡುತ್ತಿದ್ದ ತರಕಾರಿಗಳಿಗೆ ವಾರಿಸುದಾರರಿಲ್ಲದೆ ಇದೀಗ ಕೊಳೆತು ನಾರುತ್ತಿದೆ. ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಿದ್ದರಿಂದ ವಿಷಯ ತಿಳಿದಿರಲಿಲ್ಲ. ಅ.8ರಂದು ಬೆಳಿಗ್ಗೆ ಪ್ಲಾಸ್ಟಿಕ್ ಹೊದಿಕೆಯಿಂದ ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪರಿಶೀಲಿಸಿದಾಗ ತರಕಾರಿಗಳು ಕೊಳೆತಿರುವುದು ಮತ್ತು ತೂಕದ ಯಂತ್ರಗಳು ಅಲ್ಲೇ ಇರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಸಾರ್ವಜನಿಕರು ನಗರಸಭೆಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.