ಪುತ್ತೂರು: ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ ನಲ್ಲಿ ಅ.12 ಮತ್ತ 13ರಂದು ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ 14 ವರ್ಷದ ಕೆಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿರು ಲಿಖಿತ್ ರಾಮಚಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
200ಮೀ ವೈಯುಕ್ತಿಕ ಮೆಡ್ಲೆ, 4×100ಮೀ ಫ್ರೀ ಸ್ಟೈಲ್ ರಿಲೇ , 4×100ಮೀ ಮೆಡ್ಲೆ ರಿಲೇ ಯಲ್ಲಿ ಬೆಳ್ಳಿ ಪದಕ ಮತ್ತು 100 ಮೀ ಬ್ಯಾಕ್ ಸ್ಟ್ರೊಕ್ ನಲ್ಲಿ ಕಂಚಿನ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ದರ್ಬೆ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿಯಾಗಿರುವ ಲಿಖಿತ್ ರಾಮಚಂದ್ರ ಪುತ್ತೂರು ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ ನಲ್ಲಿ ತರಬೇತುದಾರರಾದ ಪಾರ್ಥ ವಾರಣಾಸಿ, ದೀಕ್ಷಿತ್ ರೋಹಿತ್ ಮತ್ತು ನಿರೂಪ್ ರವರಿಂದ ತರಬೇತಿ ಪಡೆಯುತ್ತಿದ್ದಾರೆ. ಇವರು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಹಾಗೂ ದರ್ಬೆ ದೀಪಾ ಬ್ಯೂಟಿಪಾರ್ಲರ್ ಮ್ಹಾಲಕಿ ದೀಪಾರಾಣಿ ದಂಪತಿ ಪುತ್ರ.