ಪುತ್ತೂರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ-2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ಜೀವನ್ ಮಿಷನ್ ಹಾಗು ಸ್ವಚ್ಚ ಬಾರತ್ ಮಿಷನ್ ಯೋಜನೆಯಡಿಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ನಲ್ಲಿ ಮಳೆನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಪ್ರೆರೇಪಣಾ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿತಾಕ್ಷ ನರೇಗದಿಂದ ದೊರೆಯುವ ಹಣಕಾಸಿನ ನೆರವಿನ ಬಗ್ಗೆ ಮಾಹಿತಿ ನೀಡಿದರು. ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾದಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಜಲಜೀವನ್ ಮಿಷನ್ ಪುತ್ತೂರು ತಾಲೂಕಿನ ಸಮುದಾಯ ಸಂಘಟಕ ರವೀಶ ಎ. ಆಯೋಜಿಸಿದ್ದರು.