ಪುತ್ತೂರು: ಕಬಕ ಗ್ರಾಮ ಪಂಚಾಯತ್ ವತಿಯಿಂದ ಪುರುಷ ಮತ್ತು ಮಹಿಳೆಯರ ಗ್ರಾಮೀಣ ಕ್ರೀಡೋತ್ಸವ ಕಬಡ್ಡಿ ಮತ್ತು ಖೋಖೋ ಪಂದ್ಯಾಟವು ಅ.16ರಂದು ಕಬಕ ಹಿ.ಪ್ರಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾ ಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿಯ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ಅವಕಾಶ ನೀಡುತ್ತದೆ. ಕೊರೋನಾದಿಂದಾಗಿ ಕಳೆದು ಎರಡು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾಕೂಟ ಮತ್ತೆ ಪ್ರಾರಂಭಗೊಂಡಿದೆ. ಕಬಕ ಕ್ರೀಡಾಪಟುಗಳು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಹಾರೈಸಿದರು.
ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಪುರುಷೋತ್ತಮ ಮುಂಗ್ಲಿಮನೆ ಮಾತನಾಡಿ, ನಮ್ಮ ಗ್ರಾಮದ ಪ್ರಜೆಗಳಿಗೆ ಸಂಬಂದಿಸಿದ ಕ್ರೀಡಾ ಕೂಟ. ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು ಎಂದರು.
ಗ್ರಾ.ಪಂ ಅಧ್ಯಕ್ಷ ವಿನಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾ. ಪಂ ಮಾಜಿ ಸದಸ್ಯೆ ದಿವ್ಯಾ ಪುರುಷೋತ್ತಮ, ಗ್ರಾ.ಪಂ ಉಪಾಧ್ಯಕ್ಷ ರುಕ್ಮಯ ಗೌಡ ಪೋಲ್ಯ, ಸದಸ್ಯರಾದ ಶಾಬಾ ಕೆ, ಸುಶೀಲ, ಶಾಲಾ ಮುಖ್ಯಗುರು ಲತಾ ಕುಮಾರಿ, ಎಸ್.ಡಿಎಂಸಿ ಅಧ್ಯಕ್ಷೆ ವನಿತಾ ಧರಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಿಡಿಓ ಆಶಾ ಇ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.