ಪದ್ಯಾಣ ಪ್ರಶಸ್ತಿಗೆ ಭಾಗವತದ್ವಯರಾದ ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳ ಆಯ್ಕೆ

0

ಅ.23ರಂದು ಪುತ್ತೂರು ನಟರಾಜ ವೇದಿಕೆಯಲ್ಲಿ ಪ್ರಶಸ್ತಿಪ್ರದಾನ

ಪುತ್ತೂರು: ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಕೊಡಮಾಡುವ ‘ಪದ್ಯಾಣ ಪ್ರಶಸ್ತಿ’ ಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ಆಯ್ಕೆಗೊಂಡಿದ್ದಾರೆ. 


ಅ.23ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದ್ದು, ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡಲಿದ್ದಾರೆ. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಗಿರಿ ಮೇಳದ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ಮಾಡಲಾಗುವುದು. ದಿನಪೂರ್ತಿ ನಡೆಯುವ ಕಲಾಪದಲ್ಲಿ ಯಕ್ಷಗಾನ ವಾದ-ಸಂವಾದ, ಗಾನ ವೈಭವ, ನೃತ್ಯ ವೈಭವ, ಪ್ರದರ್ಶನ ನಡೆಯಲಿದೆ.

LEAVE A REPLY

Please enter your comment!
Please enter your name here