ತಾತ್ಕಾಲಿಕ ಗೋ ಶಾಲೆಯನ್ನು ವೀಕ್ಷಣೆ ಮಾಡಿದ ಎಸಿ ಗಿರೀಶ್ ನಂದನ್
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಒಂದಲ್ಲೊಂದು ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿರುವ ಸಂದರ್ಭದಲ್ಲಿ ಇದೀಗ ದೇವಳದ ಎದುರು ಭಾಗದ ಪಂಚಾಕ್ಷರಿ ಮಂಟಪದ ಬಳಿ ಗೋ ಶಾಲೆ ನಿರ್ಮಾಣಕ್ಕೆ ಕಾರ್ಯಯೋಜನೆ ಆರಂಭಗೊಂಡಿದೆ.
ಅ.17 ರಂದು ಪುತ್ತೂರು ಸಹಾಯಕ ಕಮೀಷನರ್ ಗಿರೀಶ್‌ನಂದನ್ ಅವರು ಈಗಿರುವ ತಾತ್ಕಾಲಿಕ ಗೋ ಶಾಲೆಯನ್ನು ವೀಕ್ಷಣೆ ಮಾಡಿ ಅಲ್ಲಿರುವ ಬೇರೆ ಬೇರೆ ತಳಿಯ ದನ ಕುರುಗಳನ್ನು ವೀಕ್ಷಣೆ ಮಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಗೋ ತಳಿಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಉದ್ಯಮಿ ಶಿವಪ್ರಸಾದ್ ರೈ, ಹರೀಶ್ ಪುತ್ತೂರಾಯ ಉಪಸ್ಥಿತರಿದ್ದರು.