




ಪುತ್ತೂರು:ಕರ್ನಾಟಕ ಸರಕಾರದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ 45 ಕಿ.ಮೀ ವ್ಯಾಪ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದ್ದು ಅ.21ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಘಟಕದ ಆವರಣದಲ್ಲಿ ವಿತರಿಸಲಾಗುವುದು.
ಶಾಸಕ ಸಂಜೀವ ಮಠಂದೂರು ಬಸ್ ಪಾಸ್ ವಿತರಿಸಲಿದ್ದಾರೆ. ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.










