ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗ್ರಹಣ ಶಾಂತಿ ಹೋಮ

0


ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೂರ್ಯಗ್ರಹಣ ನಿಮಿತ್ತ ಅ.25ರಂದು ಸಂಜೆ ಸಾಮೂಹಿಕ ಗ್ರಹಣಶಾಂತಿ ಹೋಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರ ಪೌರೋಹಿತ್ಯದಲ್ಲಿ ಹೋಮ ವಿಧಿವಿಧಾನ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ಸದಸ್ಯರಾದ ಭಾಸ್ಕರ ಬಲ್ಯಾಯ, ನಿರ್ಮಲಾ ರೈ ಮದ್ಲ ಸೇರಿದಂತೆ ಅನೇಕ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here