5 ಸಾವಿರಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ..
ಪುತ್ತೂರು: ಸಾರ್ವಜನಿಕರಲ್ಲಿ, ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ವಿಶೇಷ ಕಾರ್ಯಕ್ರಮವಾಗಿರುವ `ಕೋಟಿ ಕಂಠ ಗಾಯನ’ದಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್, ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 7 ಸಾವಿರಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳು ಪಾಲ್ಗೊಂಡರು.
ಫೀಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಈ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಮಾಯಿದೆ ದೇವುಸ್ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್, ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಮಾಜಿ ಸಂಚಾಲಕ ವಂ|ವಲೇರಿಯನ್ ಡಿ’ಸೋಜ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಸಂತ ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜೆ ರೈ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್ ಎಂ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಾರ್ಮಿನ್ ಪಾಸ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೌರಿಸ್ ಕುಟಿನ್ಹಾ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರೋಸ್ಲಿನ್ ಲೋಬೊ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಮೇಶ್ ಸಿ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆರಿ ಡಿ’ಸೋಜ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಲ್ಲಾಸ್ ಪೈ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಾನೆಟ್ ಡಿ’ಸೋಜ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸಂಹಿತಾ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲೋರಾ ಪಾಸ್, ಬನ್ನೂರು ಸಂತ ಅಂತೋನಿ ಚರ್ಚ್ ಧರ್ಮಗುರು ವಂ|ಪ್ರಶಾಂತ್ ಫೆರ್ನಾಂಡೀಸ್, ಸಂತ ಫಿಲೋಮಿನಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಓಸ್ವಾಲ್ಡ್ ರೊಡ್ರಿಗಸ್, ಧರ್ಮಭಗಿನಿಯರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಆರು ಗೀತೆಗಳ ಹಾಡುವಿಕೆ…
ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ರೈಯವರ ನೇತೃತ್ವದಲ್ಲಿ ವಿದ್ಯಾರ್ಥಿ ವೃಂದ ಸರಕಾರ ನಿಗದಿಪಡಿಸಿರುವ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ `ಜಯ ಭಾರತ ಜನನಿಯ ತನುಜಾತೆ’, ಹುಯಿಲಗೊಳ ನಾರಾಯಣ ರಾವ್ ವಿರಚಿತ `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಡಾ.ಚೆನ್ನವೀರ ಕಣವಿ ವಿರಚಿತ `ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರ’, ಕುವೆಂಪು ಅವರ `ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್ ಕೀರ್ತಿಯವರ `ಹಚ್ಚೇವು ಕನ್ನಡದ ದೀಪ ಹಾಗೂ ಡಾ.ಹಂಸಲೇಖರವರ `ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಏಕಕಾಲದಲ್ಲಿ ಹಾಡಲಾಯಿತು.