




ವಿಟ್ಲ : 2022 ನೇ ಸಾಲಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ಆಯೋಜಿಸಿದ ಕೋಟಿಕಂಠ ಗಾಯನ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ. 28ರಂದು ನಡೆಯಿತು.

ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಪೋಷಕರು ಹಾಗೂ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಕಲ್ಪ ವಿಧಿಯನ್ನು ವಿದ್ಯಾರ್ಥಿನಿ ತೃಪ್ತಿ ಬೋಧಿಸಿದರು. ಸನಿಹ ವಂದಿಸಿದರು . ಶಾಲಾ ಶಿಕ್ಷಕಿ ಯಜ್ಞೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು.








