ಕಾವು :ವಿಶ್ವ ಹಿಂದೂ ಪರಿಷತ್- ಬಜರಂಗದಳ ಹಾಗೂ ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 11ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಅ 30 ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಸಾಮೂಹಿಕ ಗೋಪೂಜೆ -ಭಜನಾ ಕಾರ್ಯಕ್ರಮ:
ಸಂಜೆ ಗಂಟೆ 4.30 ರಿಂದ ವಿವಿಧ ಭಜನಾ ತಂಡಗಳಿಂದ ಭಜನ ಕಾರ್ಯಕ್ರಮ ನಡೆಯಲಿದ್ದು,ಸಂಜೆ ಗಂಟೆ 6.30 ರಿಂದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮ
ಸಂಜೆ ಗಂಟೆ 7 ರಿಂದ ದಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಗೋಪೂಜಾ ಸಮಿತಿ ಕಾವು ಇದರ ಅಧ್ಯಕ್ಷರಾದ ನಹುಷಾ ಭಟ್ ಪಳನೀರು ಸಭಾಧ್ಯಕ್ಷತೆ ವಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಧರ್ಮಚಾರ್ಯ ಸಂಪರ್ಕ ಪ್ರಮುಖ್ ಶಶಾಂಕ್ ಭಟ್ ವೇಣೂರು ಧಾರ್ಮಿಕ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ, ಪುತ್ತೂರು ಜಿಲ್ಲಾ ಬಜರಂಗದಳ ಸಹ ಸಯೋಜಕರಾದ ಲತೇಶ್ ಗುಂಡ್ಯ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಚಾರ ಪ್ರಸಾರ್ ಪ್ರಮುಖ್ ಶ್ರೀಧರ ತೆಂಕಿಲ, ಪುತ್ತೂರು ವಿಶ್ವ ಹಿಂದೂ ಪರಿಷತ್ ಪುತ್ತೂರು ಗ್ರಾಮಾಂತರ ಪ್ರಖಂಡದ ಅಧ್ಯಕ್ಷರಾದ ಸಂಕಪ್ಪ ಗೌಡ, ವಿಶ್ವ ಹಿಂದೂ ಪರಿಷತ್ ಕಾವು ಘಟಕದ ಅಧ್ಯಕ್ಷರು ಮತ್ತು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಭಾಸ್ಕರ್ ಬಲ್ಯಾಯ,ಬಜರಂಗದಳ ಪುತ್ತೂರು ಗ್ರಾಮಾಂತರದ ಸುರಕ್ಷಾ ಪ್ರಮುಖ್ ಅಜಿತ್ ಕೆಯ್ಯುರು ಭಾಗವಹಿಸಲಿದ್ದಾರೆ.
ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ
ರಾತ್ರಿ ಗಂಟೆ 8 ರಿಂದ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು 8.30 ರಿಂದ ಅನ್ನ ಸಂತರ್ಪಣೆ ನಡೆಯಲಿದೆ.ಈ ಎಲ್ಲಾ ಕಾರ್ಯಕ್ರಮದಲ್ಲಿ ಹಿಂದೂ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಗೋಪೂಜಾ ಸಮಿತಿ ಅಧ್ಯಕ್ಷರಾದ ನಹುಷಾ ಭಟ್ ಪಳನೀರು ಹಾಗೂ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ